ಚಿತ್ರದುರ್ಗ: ಕೊರೊನಾ ವೈರಸ್ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಮಂಗಳವಾರ ಒಟ್ಟು 36 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.
ಇದುವರೆಗೂ 411 ಮಂದಿ ಶಂಕಿತರ ಗಂಟಲು ದ್ರವ ಹಾಗೂ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ ಈವರೆಗೆ 337 ಜನರ ವರದಿ ನೆಗೆಟಿವ್ ಎಂದು ಬಂದಿದೆ. 56 ಜನರ ಪರೀಕ್ಷಾ ವರದಿ ವೈದ್ಯರ ಕೈಸೇರಬೇಕಿದೆ. ಇದುವರೆಗೂ ಜಿಲ್ಲೆಯ ಭೀಮಸಮುದ್ರದಲ್ಲಿ ವರದಿಯಾಗಿದ್ದ 1 ಕೋವಿಡ್-19 ಪ್ರಕರಣ ಹೊರತುಪಡಿಸಿ ಈವರೆಗೆ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ.
ಜಿಲ್ಲೆಯಲ್ಲಿ 310 ಜನರು 14 ದಿನಗಳ ಹಾಗೂ 290 ಜನರು 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. ಸದ್ಯ ವಿದೇಶ ಪ್ರಯಾಣ ಹಾಗೂ ಇವರ ಸಂಪರ್ಕ ಹಿನ್ನೆಲೆ ಹೊಂದಿದ್ದವರ ಪೈಕಿ ಈಗ ಯಾರೂ ಹೋಂ ಕ್ವಾರಂಟೈನ್ ನಿಗಾದಲ್ಲಿ ಇಲ್ಲ. 973 ಜನರಿಗೆ ಏ. 21ರಂದು ಸ್ಕ್ರೀನಿಂಗ್ ಮಾಡಲಾಗಿದ್ದು, ಇದುವರೆಗೂ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಈ ಜಿಲ್ಲೆಗೆ ಆಗಮಿಸಿದ 29,178 ಜನರಿಗೆ ಸ್ಕ್ರೀನಿಂಗ್ ಟೆಸ್ಟ್ ಮಾಡಲಾಗಿದೆ.
ಒಟ್ಟು 8214 ಜನರಿಗೆ ಜ್ವರ ತಪಾಸಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 284 ಜನರಿಗೆ ಮಾನಸಿಕ ಆರೋಗ್ಯ ತಜ್ಞರಿಂದ ಮೂರ್ನಾಲ್ಕು ದಿನಗಳಿಗೊಮ್ಮೆ ಆಪ್ತ ಸಮಾಲೋಚನೆ ಮಾಡಿಸಲಾಗಿದೆ.