ಚಿತ್ರದುರ್ಗ :ಕೋವಿಡ್-19 ಕೇರ್ ಸೆಂಟರ್ಗೆ ಸೋಂಕಿತರನ್ನ ಶಿಫ್ಟ್ ಮಾಡಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟಿಸಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆದಿದೆ.
ಸೋಂಕಿತರನ್ನ ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲು ಸ್ಥಳೀಯರ ವಿರೋಧ - chitradurga news
ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡುವ ಬದಲು ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸೋಂಕಿತರಿಗೆ ರವಾನಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು..

ಚಿತ್ರದುರ್ಗ: ಸೋಂಕಿತರನ್ನ ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲು ಸ್ಥಳೀಯರ ವಿರೋಧ
ಜಿಲ್ಲೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರನ್ನ ಭರಮಸಾಗರ ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲು ಜಿಲ್ಲಾಡಳಿತ ಮುಂದಾಗಿತ್ತು. ಮಾಹಿತಿ ಆಧರಿಸಿ ಜಮಾಯಿಸಿದ ಸ್ಥಳೀಯರು, ಪ್ರತಿಭಟನೆ ನಡೆಸುವ ಮೂಲಕ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡುವ ಬದಲು ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸೋಂಕಿತರಿಗೆ ರವಾನಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು. ಮಧ್ಯೆ ಪ್ರವೇಶಿಸಿದ ಪೊಲೀಸರು, ಪ್ರತಿಭನಾಕಾರರ ಮನವೊಲಿಸಿ ಓರ್ವ ಸೋಂಕಿತನನ್ನ ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲಾಯಿತು.