ಚಿತ್ರದುರ್ಗ:ಚಿತ್ರದುರ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಾಗಿದೆ. ಸಾಕಾಷ್ಟು ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿತ್ರದುರ್ಗ ಕ್ಷೇತ್ರದಲ್ಲಿ ಮತದಾರರು ಕಮಲಕ್ಕೆ ಜೈ ಎಂದಿದ್ದಾರೆ.
ಕೋಟೆನಾಡಲ್ಲಿ ಅರಳಿದ ಕಮಲ: ಕಾರ್ಯಕರ್ತರಿಂದ ಸಂಭ್ರಮಾಚರಣೆ - undefined
ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ವಿರುದ್ಧ ಬಿಜೆಪಿಯ ಎ.ನಾರಾಯಣ ಸ್ವಾಮಿ ಗೆಲುವು ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.
ಚಿತ್ರದುರ್ಗದಲ್ಲಿ ಅರಳಿದ ಕಮಲ
ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ವಿರುದ್ಧ ಬಿಜೆಪಿಯ ಎ.ನಾರಾಯಣ ಸ್ವಾಮಿ ಗೆಲುವು ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನು ಗೆಲುವು ಸಾಧಿಸಿರುವ ಬಿಜೆಪಿಯ ಎ.ನಾರಾಯಣ ಸ್ವಾಮಿಯವರು 80,067 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ಇನ್ನು ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 5,45,948 ಮತಗಳನ್ನು ಪಡೆದರೆ, ಬಿಜೆಪಿಯ ಎ.ನಾರಾಯಣ ಸ್ವಾಮಿ 6,26,015 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು.