ಚಿತ್ರದುರ್ಗ: ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಜೊತೆ ಸಂಪರ್ಕದಲ್ಲಿದ್ದವರು ಹೋಂ ಕ್ವಾರಂಟೈನ್ ಆಗುವಂತೆ ಸೂಚಿಸಿದ್ದಾರೆ.
ಶಾಸಕ ರಘು ಆಚಾರ್ಗೆ ಕೊರೊನಾ ಪಾಸಿಟಿವ್: ಅಧಿವೇಶನಕ್ಕೆ ಗೈರು - ಚಿತ್ರದುರ್ಗ ಜಿಲ್ಲಾ ಕೋವಿಡ್ 19 ಆಸ್ಪತ್ರೆ
ಶಾಸಕ ರಘು ಆಚಾರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.

Raghu achar
ನನಗೆ ರೋಗದ ಲಕ್ಷಣಗಳು ಇಲ್ಲದಿದ್ದರು ಕೂಡ ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ನನ್ನ ಸಂಪರ್ಕದಲ್ಲಿರುವವರು ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಶಾಸಕ ರಘು ಆಚಾರ್ ಮನವಿ ಮಾಡಿದ್ದಾರೆ.
ಇಂದಿನ ಅಧಿವೇಶನದಲ್ಲಿ ಪಾಲ್ಗೊಳ್ಳಬೇಕಾಗಿದ್ದ ಅವರು, ಕಳೆದ ದಿನ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದರಿಂದ ಅಧಿವೇಶನಕ್ಕೆ ಗೈರಾಗಿದ್ದಾರೆ. ಈ ಹಿಂದೆ ಚಿತ್ರದುರ್ಗ ಜಿಲ್ಲಾ ಕೋವಿಡ್-19 ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ಗಳಿಗೆ ಪಿಪಿಇ ಕಿಟ್ ಧರಿಸಿ ಶಾಸಕರು ಭೇಟಿ ನೀಡಿದ್ದು, ಆಸ್ಪತ್ರೆ ಸಿಬ್ಬಂದಿಗೆ ಆತಂಕ ಮೂಡಿಸಿದೆ.
TAGGED:
ಶಾಸಕ ರಘು ಆಚಾರ್