ಚಿತ್ರದುರ್ಗ:ಕೊರೊನಾ ಭೀತಿಯ ನಡುವೆಯೇ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳಿಗೆ ಸಂಸದ ಎ.ನಾರಾಯಣಸ್ವಾಮಿ ಧೈರ್ಯ ತುಂಬಿದರು.
ಚಿತ್ರದುರ್ಗ: ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಸಂಸದ ನಾರಾಯಣಸ್ವಾಮಿ ಭೇಟಿ
ಚಿತ್ರದುರ್ಗದ ಸಂತ ಜೋಸೆಫ್ ಕಾನ್ವೆಂಟ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಬಿಜೆಪಿ ಸಂಸದ ಎ.ನಾರಾಯಣಸ್ವಾಮಿ ಭೇಟಿ ನೀಡಿ ಪರೀಕ್ಷಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರು.
ಕೇಂದ್ರಕ್ಕೆ ಭೇಟಿ ನೀಡಿದ ಸಂಸದ ನಾರಾಯಣ ಸ್ವಾಮಿ
ನಗರದ ಸಂತ ಜೋಸೆಫ್ ಕಾನ್ವೆಂಟ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಪರೀಕ್ಷಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರು. ಕೊರೊನಾ ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಸೇರಿದಂತೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸಿಗ್ ಮಾಡಿಸಿ ಬಳಿಕ ಪರೀಕ್ಷಾ ಕೇಂದ್ರದೊಳಗೆ ಕಳುಹಿಸುವಂತೆ ಸ್ಥಳೀಯ ಸಿಬ್ಬಂದಿಗೆ ತಾಕೀತು ಮಾಡಿದರು.
ಪರೀಕ್ಷಾ ಕೇಂದ್ರದೊಳಗೆ ಭೇಟಿ ನೀಡುವ ಮೊದಲೇ ಸಂಸದರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಕಳುಹಿಸಿಕೊಡಲಾಯಿತು.