ಚಿತ್ರದುರ್ಗ: ಶಿಕ್ಷಣ ಪಡೆದ ಎಲ್ಲರಿಗೂ ಉದ್ಯೋಗ ಸಿಗುತ್ತದೆ ಎಂದು ಹೇಳಲಾಗದು. ಹಾಗಾಗಿ ಶಿಕ್ಷಣದ ಜೊತೆಗೆ ಕೌಶಲ್ಯ ರೂಢಿಸಿಕೊಳ್ಳಬೇಕು. ಕೌಶಲ್ಯ ಇದ್ದರೆ ಉದ್ಯೋಗ ತಾನಾಗಿಯೇ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಉದ್ಯೋಗಾಕಾಂಕ್ಷಿಗಳಿಗೆ ಸಲಹೆ ನೀಡಿದ್ದಾರೆ.
ಉದ್ಯೋಗಕ್ಕಾಗಿ ಕೌಶಲ್ಯ ಬೆಳೆಸಿಕೊಳ್ಳಿ: ಡಿಸಿ ವಿನೋತ್ ಪ್ರಿಯಾ ಸಲಹೆ - Chitradurga udyoga mela news
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಸಾಲಿಗೆ ಎಸ್‍ಸಿಪಿ/ಟಿಎಸ್‍ಪಿ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿಗೆ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಸಾಲಿಗೆ ಎಸ್‍ಸಿಪಿ/ಟಿಎಸ್‍ಪಿ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿಗೆ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿಯೇ ಉತ್ತಮವಾದ ವೃತ್ತಪರ ಕೋರ್ಸ್‍ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಳಿಕ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಮಾತನಾಡಿ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ವಿಶೇಷ ತರಬೇತಿ ಪಡೆದರೆ ಉತ್ತಮ ಅವಕಾಶಗಳು ಒದಗಿಬರುತ್ತವೆ. ವೈದ್ಯಕೀಯ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳಾಗಿವೆ. ಜೊತೆಗೆ ಅರೆ ವೈದ್ಯಕೀಯ ಕೋರ್ಸ್‍ಗಳಾದ ಎಎನ್‍ಎಂ, ಜಿಎನ್‍ಎಂ, ಬಿಎಸ್‍ಸಿ ನರ್ಸಿಂಗ್, ಹೆಲ್ತ್ ಇನ್ಸ್ಪೆಕ್ಟರ್ ಸೇರಿದಂತೆ ಇನ್ನೂ ಅನೇಕ ವೃತ್ತಿಪರ ಕೋರ್ಸ್‍ಗಳಿಗೆ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದೆ. ಕೇರಳ ರಾಜ್ಯದ ಸುಮಾರು 70 ರಷ್ಟು ಮಂದಿ ವಿದೇಶಗಳಲ್ಲಿ ವೈದಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಉದ್ಯೋಗಮೇಳದಲ್ಲಿ ಉದ್ಯೋಗ ಸಿಗದೆ ಇರುವ ಅಭ್ಯರ್ಥಿಗಳು ನಿರಾಶರಾಗಬಾರದು ಎಂದು ಸಲಹೆ ನೀಡಿದರು.