ಕರ್ನಾಟಕ

karnataka

ETV Bharat / state

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೂ ಕಾಲಿಟ್ಟ ಕೊರೊನಾ: ಆತಂಕದಲ್ಲಿ ಸಿಬ್ಬಂದಿ - Chitradurgha covid cases

ಚಿತ್ರದುರ್ಗ ಜಿಲ್ಲಾಧಿಕಾರಿ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯನ್ನು ಸೀಲ್​​​ಡೌನ್ ಮಾಡಲಾಗಿದೆ.

Dc
Dc

By

Published : Jul 22, 2020, 1:56 PM IST

ಚಿತ್ರದುರ್ಗ: ಮಹಾಮಾರಿ ಕೊರೊನಾ ವೈರಸ್ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೂ ಕಾಲಿಟ್ಟಿದೆ. ಜಿಲ್ಲಾಧಿಕಾರಿ ಡಾ. ವಿನೋತ್ ಪ್ರಿಯಾ ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ ದಿನ ಸೋಂಕು ಪತ್ತೆಯಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಇಡೀ ಜಿಲ್ಲಾಧಿಕಾರಿ ಕಚೇರಿಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ಜೊತೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ಡಿಸಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಇನ್ನು ಸೋಂಕಿತ ಆಪ್ತ ಸಹಾಯಕನಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗೂ ಕೊರೊನಾ ಇರುವುದು ದೃಢವಾಗಿದ್ದು, ಜಿಲ್ಲಾ ಸರ್ವೇಕ್ಷಣೆ ಕಚೇರಿಗೆ ಸ್ಯಾನಿಟೈಸರ್ ಮಾಡಲಾಗಿದೆ. ಹಾಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಆತಂಕದಲ್ಲಿಯೇ ಕಾರ್ಯನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ABOUT THE AUTHOR

...view details