ಚಿತ್ರದುರ್ಗ: ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಸಿಎಂ ಇನ್ನೂ ನಿರ್ಧರಿಸಿಲ್ಲ, ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಇದರ ಬಗ್ಗೆ ಚರ್ಚೆ ನಡೆದಿದ್ದು, ಸಿಎಂ ಎಲ್ಲರನ್ನು ಸಮಾಧಾನ ಪಡಿಸಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಶ್ರೀ ರಾಮುಲು ತಿಳಿಸಿದರು.
ಚಿತ್ರದುರ್ಗದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಬದಲಾವಣೆ ತೀರ್ಮಾನ ರಾಷ್ಟ್ರೀಯ ನಾಯಕರು ತೆಗೆದುಕೊಳ್ಳಬೇಕಾಗುತ್ತದೆ. ಪಕ್ಷದ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ, ಕೊರೊನಾ ಸಂದರ್ಭದಲ್ಲೂ ನಮ್ಮ ಸರ್ಕಾರ ಬ್ಯಾಲೆನ್ಸ್ ಮಾಡಿಕೊಂಡು ಸಾಗಿದೆ ಎಂದರು.