ಚಿತ್ರದುರ್ಗ:ನಗರ ಸೇರಿದಂತೆ ಜಿಲ್ಲೆಯ ಕೆಲವೆಡೆ ನಿನ್ನೆ ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿದಿದೆ. ಇನ್ನು ತೆಂಗಿನಮರವೊಂದಕ್ಕೆ ಸಿಡಿಲು ಬಡಿದಿದ್ದು, ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ತೆಂಗಿನಮರಕ್ಕೆ ಬಡಿದ ಸಿಡಿಲು: ಸ್ಥಳೀಯರ ಮೊಬೈಲ್ನಲ್ಲಿ ಸೆರೆ - etv bharat
ತೆಂಗಿನಮರಕ್ಕೆ ಸಿಡಿಲು ಬಡಿದಿದ್ದು, ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. ಸಿಡಿಲಿನಿಂದ ದೇವಸ್ಥಾನದ ಮೇಲೆ ಇರುವ ಬಸವಣ್ಣನ ವಿಗ್ರಹ ಕೂಡ ಹಾನಿಯಾಗಿದೆ.
ತೆಂಗಿನ ಮರಕ್ಕೆ ಸಿಡಿಲು ಬಡಿದ ದೃಶ್ಯ
ಜಿಲ್ಲೆಯ ಹಿರಿಯೂರು ತಾಲೂಕಿನ ಕಾಟನಾಯಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರು ಸಿಡಿಲು ಬಡಿದು ತೆಂಗಿನಮರ ಉರಿಯುತ್ತಿರುವ ದೃಶ್ಯ ನೋಡಿ ಗಾಬರಿಗೊಳಗಾದರು. ಗ್ರಾಮದ ಶ್ರೀ ಪಾರ್ಥಲಿಂಗೇಶ್ವರ ದೇವಸ್ಥಾನ ಪಕ್ಕದಲ್ಲಿರುವ ತೆಂಗಿನಮರಕ್ಕೆ ಸಿಡಿಲು ಬಡಿದ ಪರಿಣಾಮ ದೇವಸ್ಥಾನದ ಮೇಲೆ ಇರುವ ಬಸವಣ್ಣನ ವಿಗ್ರಹ ಕೂಡ ಹಾನಿಯಾಗಿದೆ. ಮಾಹಿತಿ ತಿಳಿದ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.