ಚಿತ್ರದುರ್ಗ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೊಬ್ಬರು ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಘಟನೆ ನಡೆದಿದೆ. ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗಿದ್ದರೂ ಅಧ್ಯಕ್ಷರು ಸರ್ಕಾರಿ ವಾಹನ ಬಳಕೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಂದ ನೀತಿ ಸಂಹಿತೆ ಉಲ್ಲಂಘನೆ
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ್ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗಿದ್ದರೂ ಸರ್ಕಾರಿ ವಾಹನ ಬಳಕೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ್ ಅವರಿಂದ ಕಾರು ಬಳಕೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದ್ದು, ಚಳ್ಳಕೆರೆಯ ತಹಸೀಲ್ದಾರ್ ತುಷಾರ್ ಬಿ. ಹೊಸೂರ್ ಅವರು ಕಾರು ವಶಕ್ಕೆ ಪಡೆದರು. ಆಯೋಗದ ಅಧ್ಯಕ್ಷ ಕಾಂತರಾಜ್ ಸಹಿತ ಕುಟುಂಬದವರು ಚಳ್ಳಕೆರೆ ವೀರಶೈವ ಕಲ್ಯಾಣ ಮಂಟಪದಲ್ಲಿದ್ದ ಮದುವೆಗೆ ಸರ್ಕಾರಿ ಕಾರು ತಂದಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಧಿಕಾರಿಗಳು ಕಾರು ವಶಕ್ಕೆ ಪಡೆದರು.
ಚಳ್ಳಕೆರೆ ತಹಸೀಲ್ದಾರ್ ತುಷಾರ್ ಬಿ. ಹೊಸೂರ್ ಅವರು ಆಯೋಗದ ಅಧ್ಯಕ್ಷ ಕಾಂತರಾಜ್ ವಿರುದ್ಧ ಕ್ರಮ ಜರುಗಿಸುವ ಸಾಧ್ಯತೆ ಇದೆ.