ಕರ್ನಾಟಕ

karnataka

ETV Bharat / state

ಲಾರಿಗಳ ನಡುವೆ ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ: ಅದೃಷ್ಟವಶಾತ್​ ತಪ್ಪಿದ ಅನಾಹುತ

ಚಿತ್ರದುರ್ಗದಲ್ಲಿ ಎರಡು ಲಾರಿಗಳ ನಡುವೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

By

Published : Oct 21, 2020, 10:47 AM IST

ಸುಟ್ಟು ಕರಕಲಾದ ಲಾರಿ
ಸುಟ್ಟು ಕರಕಲಾದ ಲಾರಿ

ಚಿತ್ರದುರ್ಗ: ಕಂಟೇನರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ಜರುಗಿದೆ.

ಸುಟ್ಟು ಕರಕಲಾದ ಲಾರಿ

ಕಂಟೇನರ್ ಲಾರಿಗೆ ಬಣ್ಣದ ಡಬ್ಬಗಳನ್ನು ಸಾಗಣಿಕೆ ಮಾಡುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಬಣ್ಣದ ಡಬ್ಬಗಳನ್ನು ಸಾಗಣೆ ಮಾಡುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡು ಇಡೀ ಲಾರಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಸುಟ್ಟು ಕರಕಲಾದ ಬಣ್ಣದ ಡಬ್ಬಿಗಳು

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ABOUT THE AUTHOR

...view details