ಚಿತ್ರದುರ್ಗ: ಗ್ರೀನ್ ಝೋನ್ ಪ್ರದೇಶದಲ್ಲಿ ಮದ್ಯದಂಗಡಿ ತೆರೆಯುವ ವಿಚಾರವಾಗಿ ಈಗಾಗಲೇ ಕಾಂಗ್ರೆಸ್-ಬಿಜೆಪಿ ಮಧ್ಯೆ ಶೀತಲ ಸಮರ ಏರ್ಪಟ್ಟಿದೆ.
ಮದ್ಯದಂಗಡಿ ತೆರೆಯುವ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಗೊಂದಲವಿದೆ: ಸಚಿವ ಈಶ್ವರಪ್ಪ - ಸಚಿವ ಕೆ.ಎಸ್.ಈಶ್ವರಪ್ಪ ಲೆಟೆಸ್ಟ್ ನ್ಯೂಸ್
ಮದ್ಯದಂಗಡಿ ತೆರೆಯುವ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಗೊಂದಲವಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಪಕ್ಷದ ನಾಯಕರಿಗೆ ಟಾಂಗ್ ನೀಡಿದರು.
ಮದ್ಯದಂಗಡಿ ತೆರೆಯುವ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಗೊಂದಲವಿದೆ: ಸಚಿವ ಈಶ್ವರಪ್ಪ
ಈ ಬಗ್ಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಬೇರೆ ಉದ್ಯೋಗ ಇಲ್ಲ. ಡಿಕೆಶಿ, ಸಿದ್ಧರಾಮಯ್ಯ ಬಡಿದಾಡುತ್ತಿದ್ದಾರೆ. ರಾಜಕಾರಣ ಬಿಟ್ಟು ಬೇರೇನಿಲ್ಲ. ಮದ್ಯದಂಗಡಿ ತೆರೆಯುವ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಗೊಂದಲವಿದೆ. ಮೊದಲು ಅವರಿಬ್ಬರು ಕುಳಿತು ಮಾತಾಡಿಕೊಂಡು ಹೇಳಲಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಟಾಂಗ್ ನೀಡಿದರು.