ಚಿತ್ರದುರ್ಗ:ಸಿಎಂ ಯಡಿಯೂರಪ್ಪರವರು ಮಾತನಾಡಿದ್ದಾರೆ ಎನ್ನಲಾದ ಶಾಸಕರ ಖರೀದಿಯ ವಿಡಿಯೋವೊಂದು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿದೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ದರು.
ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ - ಸಿಎಂ ಯಡಿಯೂರಪ್ಪರವರು ಶಾಸಕರ ಖರೀದಿಯ ವಿಡಿಯೋ ವೈರಲ್
ಬಿಜೆಪಿ ಸಭೆಯಲ್ಲಿ ಶಾಸಕರ ಖರೀದಿ ಬಗ್ಗೆ ಸಿಎಂ ಯಡಿಯೂರಪ್ಪ ಪ್ರಸ್ತಾಪಿದ್ದರು ಎನ್ನಲಾದ ವಿಡಿಯೋವೊಂದು ಸೋರಿಕೆಯಾಗಿದ್ದು, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಿ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ
ನಗರದ ಡಿಸಿ ವೃತ್ತದಲ್ಲಿ ಜಮಾಯಿಸಿದ್ದ ಕೈ ಕಾರ್ಯಕರ್ತರು ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು. ನಗರದ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಡಿಸಿ ವೃತ್ತ ತಲುಪಿ, ಬಳಿಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಅಪರ ಜಿಲ್ಲಾಧಿಕಾರಿ ಸಂಗಪ್ಪ ನವರಿಗೆ ಮನವಿ ಸಲ್ಲಿಸಿದರು.