ಚಿತ್ರದುರ್ಗ : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಸಲಾಯಿತು.
ಮಾಜಿ ಪ್ರಧಾನಿ ಪುಣ್ಯಸ್ಮರಣೆ : ಸಾಮಾಜಿಕ ಅಂತರ ಮರೆತ ಕೈ ನಾಯಕರು - chitradurga congress news
ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೈ ನಾಯಕರು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಎದುರೆ ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ ಗುಂಪು ಗುಂಪಾಗಿ ಸೇರಿದ್ರು.

ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೈ ನಾಯಕರು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಎದುರೆ ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ ಗುಂಪು ಗುಂಪಾಗಿ ಸೇರಿದ್ರು. ಜಿಲ್ಲಾ ಸಮಿತಿ ಅಧಿಕಾರ ಹಂಚುವ ಸಲುವಾಗಿ ಕೈ ಮುಖಂಡರೊಂದಿಗೆ ಖಂಡ್ರೆ ಸಭೆ ನಡೆಸಿದರು. ಈ ಸಭೆಯಲ್ಲಿ ಶಾಸಕ ರಘುಮೂರ್ತಿ ಸೇರಿದಂತೆ, ಮಾಜಿ ಸಂಸದ ಚಂದ್ರಪ್ಪ,ಮಾಜಿ ಸಚಿವರು, ಮಾಜಿ ಶಾಸಕರುಗಳು ಸಹ ಭಾಗಿಯಾಗಿದ್ರು.
ಈ ಸಂದರ್ಭದಲ್ಲಿ ಗುಂಪು ಗುಂಪಾಗಿ ಕಚೇರಿಯೊಳಗೆ ಸೇರಿದ್ದ ನೂರಾರು ಜನ ಕೈ ನಾಯಕರು ಮಾಸ್ಕ್ ಧರಿಸದೇ ಜಿಲ್ಲಾ ಸಮಿತಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಪರಸ್ಪರ ಮಾತಿನ ಚಕಮಕಿ ನಡೆಸಿಕೊಂಡರು. ಮಧ್ಯಪ್ರವೇಶಿಸಿದ ಪೊಲೀಸರು ಕಾಂಗ್ರೆಸ್ ಕಚೇರಿಗೆ ಬೀಗ ಹಾಕಿಸಿ, ಎಲ್ಲರನ್ನೂ ಹೊರಗೆ ಕಳುಹಿಸಿ ಪರಿಸ್ಥಿತಿ ಶಾಂತಗೊಳಿಸಿದ್ರು.