ಚಿತ್ರದುರ್ಗ:ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ನೀಡಿದ್ದ ಅವಹೇಳನಕಾರಿ ಹೇಳಿಕೆ ಖಂಡಿಸಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟಿಸಿದರು.
ಅನಂತ್‌ಕುಮಾರ್ ಹೆಗಡೆ ವಿರುದ್ಧ ಚಿತ್ರದುರ್ಗದಲ್ಲೂ ಕಾಂಗ್ರೆಸ್ ಪ್ರತಿಭಟನೆ.. - ಗಾಂಧೀಜಿ ವಿರುದ್ಧ ಸಂಸದ ಅನಂತ್ ಕುಮಾರ್ ಹೇಳಿಕೆ
ಕೂಡಲೇ ಸಂಸದ ಸ್ಥಾನಕ್ಕೆ ಅನಂತ್‌ಕುಮಾರ್ ಹೆಗಡೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ.
ಮಹಾತ್ಮಾ ಗಾಂಧೀಜಿ ವಿರುದ್ಧ ಸಂಸದ ಅನಂತ್ ಕುಮಾರ್ ಅವಹೇಳನಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ನಗರದ ಡಿಸಿ ವೃತ್ತದಲ್ಲಿ ಮಾಜಿ ಸಂಸದ ಬಿ ಎನ್ ಚಂದ್ರಪ್ಪ ನೇತೃತ್ವದಲ್ಲಿ ಪ್ರತಿಭಟಿನೆ ನಡೆಯಿತು. ಆಕ್ರೋಶ ಭರಿತರಾದ ಕೈ ಕಾರ್ಯಕರ್ತರು ಸಂಸದ ಅನಂತ್ ಕುಮಾರ್ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು, ಉಗುಳಿ ಅವಮಾನಿಸಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಕೂಡಲೇ ಸಂಸದ ಸ್ಥಾನಕ್ಕೆ ಅನಂತ್‌ಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.