ಚಿತ್ರದುರ್ಗ: ಜಿಲ್ಲೆಯಲ್ಲಿಂದು 81 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ಘೋಷಣೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ 81 ಜನರಿಗೆ ಕೊರೊನಾ ತಗುಲಿರುವುದು ಖಾತ್ರಿಯಾಗಿದ್ದು, ಸೋಂಕಿತರ ಸಂಖ್ಯೆ 11,973ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗದಲ್ಲಿ 81 ಜನರಲ್ಲಿ ಕೊರೊನಾ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 11,973 ಕ್ಕೇರಿಕೆ - Chitradurga corona news
ಚಿತ್ರದುರ್ಗ ಜಿಲ್ಲಾ ಆರೋಗ್ಯ ಇಲಾಖೆ ಘೋಷಣೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ 81 ಜನರಿಗೆ ಕೊರೊನಾ ತಗುಲಿರುವುದು ಖಾತ್ರಿಯಾಗಿದ್ದು, ಸೋಂಕಿತರ ಸಂಖ್ಯೆ 11,973 ಕ್ಕೆ ಏರಿಕೆಯಾಗಿದೆ.
ಕೋವಿಡ್-19 ಆಸ್ಪತ್ರೆ ಸೇರಿದಂತೆ ವಿವಿಧ ಕೋವಿಡ್ ಕೇರ್ ಸೆಂಟರ್ಗಳಿಂದ ಇಂದು 56 ಜನ ಇಂದು ಬಿಡುಗಡೆಯಾಗಿದ್ದಾರೆ. 726 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವರದಿಯಲ್ಲಿ 81 ಜನರಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದು ಬಂದಿದೆ. ಈಗಾಗಲೇ ಕೊರೊನಾದಿಂದ 56 ಜನ ಕೊನೆಯುಸಿರೆಳೆದರೆ ಒಬ್ಬರು ಮಾತ್ರ ಇತರ ಕಾರಣದಿಂದ ಸಾವನ್ನಪ್ಪಿರುವುದು ವರದಿಯಾಗಿದೆ.
ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,973ಕ್ಕೆ ಏರಿಕೆಯಾಗಿದ್ದು, 11,176 ಜನ ಸೋಂಕಿನಿಂದ ಗುಣಮುಖರಾದರೆ ಇನ್ನುಳಿದ 740 ಜನ ಕೋವಿಡ್ ಕೇರ್ ಸೆಂಟರ್ ಸೇರಿದಂತೆ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.