ಚಿತ್ರದುರ್ಗ: ಜಿಲ್ಲೆಯಲ್ಲಿಂದು 51 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 1213 ಕ್ಕೆ ಏರಿಕೆಯಾಗಿದೆ. ಇಂದು ಆಸ್ಪತ್ರೆಯಿಂದ 24 ಜನ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗದಲ್ಲಿ ಮತ್ತೆ 51 ಮಂದಿಗೆ ಕೊರೊನಾ: ಸೋಂಕಿತರ ಸಂಖ್ಯೆ 1213 ಕ್ಕೆ ಏರಿಕೆ - ಕೊರೊನಾ
ಕೋಟೆನಾಡು ಚಿತ್ರದುರ್ಗದಲ್ಲಿ ಮತ್ತೆ 51 ಮಂದಿಗೆ ಕೊರೊನಾ ವಕ್ಕರಿಸಿದ್ದು, ಆಸ್ಪತ್ರೆಯಿಂದ ಇಂದು 24 ಜನ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗದಲ್ಲಿ ಮತ್ತೆ 51 ಮಂದಿಗೆ ಕೊರೊನಾ
ಚಿತ್ರದುರ್ಗ07, ಹೊಳಲ್ಕೆರೆ 05, ಹಿರಿಯೂರು 11, ಮೊಳಕಾಲ್ಮೂರು 04, ಚಳ್ಳಕೆರೆ 21, ಹೊಸದುರ್ಗ 03 ಪ್ರಕರಣ ಪತ್ತೆಯಾಗಿವೆ. ಒಟ್ಟು 578 ಜನ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನುಳಿದ 617 ಜನ ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾಗೆ 18 ಜನ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದ್ದರಿಂದ ಜನ್ರಲ್ಲಿ ಭಯಯದ ವಾತಾವರಣ ನಿರ್ಮಾಣ ಮಾಡಿದೆ.