ಚಿತ್ರದುರ್ಗ:ಜಿಲ್ಲೆಯಲ್ಲಿ ಸದ್ಯ 62 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದ್ದು, ಈ ಪೈಕಿ 61 ಜನರನ್ನು ಆಯಾ ವ್ಯಕ್ತಿಗಳ ಮನೆಯಲ್ಲಿಯೇ ಪ್ರತ್ಯೇಕಿಸಿ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
62 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ, 12 ಜನರ ವರದಿ ನೆಗೆಟಿವ್: ಚಿತ್ರದುರ್ಗ ಡಿಸಿ - corona cases in chitradurga
ಚಿತ್ರದುರ್ಗದಲ್ಲಿ ಇದುವರೆಗೂ ಯಾವುದೇ ಕೊರೊನಾ ಸೋಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ. ಶಂಕಿತ ವ್ಯಕ್ತಿಗಳನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಹಿಂದೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ 12 ಜನರ ವರದಿಯು ನೆಗೆಟಿವ್ ಎಂದು ಬಂದಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಬ್ಬ ಶಂಕಿತನನ್ನು ಮಾತ್ರ ಆಸ್ಪತ್ರೆಯಲ್ಲಿ ದಾಖಲಿಸಿಲಾಗಿದೆ. ಇನ್ನು ಜಿಲ್ಲೆಯಲ್ಲಿ ಶಂಕಿತ ಪ್ರಕರಣವೆಂದು ಪರಿಗಣಿಸಲಾದ 18 ಜನ ಈಗಾಗಲೇ 14 ದಿನಗಳ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಅವರಲ್ಲಿ ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಇದುವರೆಗೂ 31 ಜನರ ಗಂಟಲು ದ್ರವ ಹಾಗೂ ರಕ್ತ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದರಲ್ಲಿ 12 ಜನರ ಪರೀಕ್ಷಾ ವರದಿ ನೆಗೆಟಿವ್ ಎಂದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕು ದೃಢಪಟ್ಟಿರುವ ಯಾವುದೇ ಪ್ರಕರಣ ವರದಿಯಾಗಿಲ್ಲ. ಸಾರ್ವಜನಿಕರು ಯಾವುದೇ ಸುಳ್ಳು ಮಾಹಿತಿ ಅಥವಾ ವದಂತಿಗಳನ್ನು ನಂಬಬಾರದು. ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.