ಚಿತ್ರದುರ್ಗ : ಜಿಲ್ಲೆಯಲ್ಲಿ 219 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,816ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ 219 ಜನರಿಗೆ ಕೊರೊನಾ ಸೋಂಕು ದೃಢ - covid news updates
ಚಿತ್ರದುರ್ಗ ಜಿಲ್ಲೆಯಲ್ಲಿ 219 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,816ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 136, ಚಳ್ಳಕೆರೆ 38, ಹಿರಿಯೂರು 05, ಹೊಸದುರ್ಗ 08, ಮೊಳಕಾಲ್ಮುರು 16 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 16 ಸೇರಿದಂತೆ ಒಟ್ಟು 219 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 348 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
829 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 219 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 5,816ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 4409 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1372 ಸಕ್ರಿಯ ಪ್ರಕರಣಗಳು ಇವೆ.