ಚಿತ್ರದುರ್ಗ: ಮಹಾಮಾರಿ ಕೊರೊನಾ ಸೋಂಕು ಜಿಲ್ಲಾಧಿಕಾರಿ ಕಚೇರಿಗೆ ಕಾಲಿಟ್ಟಿದ್ದು, ಜಿಲ್ಲಾಧಿಕಾರಿ ಡಾ. ವಿನೋತ್ ಪ್ರಿಯಾರವರ ಮತ್ತೋರ್ವ ಆಪ್ತಸಹಾಯಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮತ್ತೋರ್ವ ಪಿಎಗೂ ಸೋಂಕು ದೃಢ; ಆತಂಕದಲ್ಲಿ ಚಿತ್ರದುರ್ಗ ಡಿಸಿ - Chitradurga corona news
ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿಯ ಓರ್ವ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದೀಗ ಮತ್ತೋರ್ವ ಪಿಎಗೂ ಸೋಂಕು ತಗುಲಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕೆಲ ದಿನಗಳ ಹಿಂದಷ್ಟೇ ಜಿಲ್ಲಾಧಿಕಾರಿಯ ಓರ್ವ ಆಪ್ತಸಹಾಯಕನಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದೀಗ ಮತ್ತೋರ್ವ ಪಿಎಗೂ ಕೊರೊನಾ ಪಾಸಿಟಿವ್ ಬಂದಿದ್ದು, ಜಿಲ್ಲಾಧಿಕಾರಿ ಸೇರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ.
ನಿನ್ನೆ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದರಿಂದ, ಮುಂಜಾಗ್ರತಾ ಕ್ರಮವಾಗಿ ಇಡೀ ಜಿಲ್ಲಾಧಿಕಾರಿ ಕಚೇರಿಗೆ ಸ್ಯಾನಿಟೈಸರ್ ಸಿಂಪಡಿಸಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೋಂಕಿತರನ್ನು ಮನೆಯಲ್ಲಿಯೇ ಐಸೋಲೇಷನ್ ಗೆ ಒಳಪಡಿಸಲಾಗಿದೆ. ಇಬ್ಬರು ಆಪ್ತ ಸಹಾಯಕರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಇಂದು ಡಿಸಿ ಡಾ. ವಿನೋತ್ ಪ್ರಿಯಾ ಸೇರಿ ಹಲವು ಅಧಿಕಾರಿಗಳು ಸ್ವಾಬ್ ಟೆಸ್ಟ್ ಮಾಡಿಸಿಕೊಳ್ಳಲಿದ್ದಾರೆ.