ಕರ್ನಾಟಕ

karnataka

ETV Bharat / state

ಚಿತ್ರದುರ್ಗದಲ್ಲಿ 72 ಮಂದಿಗೆ ಕೊರೊನಾ ದೃಢ : ಸೋಂಕಿತರ ಸಂಖ್ಯೆ 10,529 ಕ್ಕೆ ಏರಿಕೆ - Corona in Chitradurga

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಸಂಖ್ಯೆ 10,529 ಕ್ಕೆ ಏರಿಕೆಯಾಗಿ,ಇಬ್ಬರು ಮೃತಪಟ್ಟಿದ್ದಾರೆ.

gfdf
ಚಿತ್ರದುರ್ಗದಲ್ಲಿ 72 ಮಂದಿಗೆ ಕೊರೊನಾ ದೃಢ

By

Published : Oct 18, 2020, 11:04 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಮತ್ತೆ 72 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,529 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಕೆಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 54 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 1494 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 72 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ.

ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಇದುವರೆಗೆ 51 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 10,117 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಸದ್ಯ 360 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details