ಚಿತ್ರದುರ್ಗ: ಜಿಲ್ಲೆಯಲ್ಲಿಂದು 83 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,056ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗದಲ್ಲಿಂದು 83 ಜನರಿಗೆ ಕೊರೊನಾ..97 ಮಂದಿ ಗುಣಮುಖ - Chitradurga Corona Death
ಚಿತ್ರದುರ್ಗದಲ್ಲಿಂದು 83 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 97 ಜನರು ಗುಣಮುಖರಾಗಿ ವಿವಿಧ ಕೋವಿಡ್ 19 ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಚಿತ್ರದುರ್ಗದಲ್ಲಿಂದು 83 ಜನರಿಗೆ ಕೊರೊನಾ..97 ಮಂದಿ ಗುಣಮುಖ
ಇಂದು 97 ಜನರು ಗುಣಮುಖರಾಗಿ ವಿವಿಧ ಕೋವಿಡ್ 19 ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 11,273 ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. 708 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವರದಿಯಲ್ಲಿ 83 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜಿಲ್ಲೆಯಲ್ಲಿ ಕೊರೊನಾಗೆ ಈವರೆಗೆ 58 ಮಂದಿ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಸದ್ಯ 724 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ.