ಕರ್ನಾಟಕ

karnataka

ETV Bharat / state

ಹಿರಿಯೂರು ಬಿಜೆಪಿ ಶಾಸಕಿಗೆ ಕೊರೊನಾ - mla poornima corona positive

ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್​ಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

Corona positive for BJP mla Purnima Shrenivasa
ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ

By

Published : Aug 18, 2020, 4:14 PM IST

ಚಿತ್ರದುರ್ಗ: ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್​ಗೆ ಕೊರೊನಾ ಸೋಂಕು ತಗುಲಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ ಎಂದು ತಮ್ಮ ಫೇಸ್​ಬುಕ್​​ ಖಾತೆಯಲ್ಲಿ ಬರೆದುಕೊಂಡಿದ್ದಾರೆ​.

ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್​

ನಿನ್ನೆ (ಆ. 17) ಬೆಂಗಳೂರಿನಲ್ಲಿ ಪರೀಕ್ಷೆಗೆ ಒಳಪಟ್ಟ ಹಿನ್ನೆಲೆ ಸೋಂಕು ಪತ್ತೆಯಾಗಿದೆ. ಸಂಪರ್ಕದಲ್ಲಿದ್ದ ಜನರಿಗೆ ಹಾಗೂ ಆಪ್ತ ವಲಯಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಈಗಾಗಲೇ ಬೆಂಗಳೂರಿನ ಮನೆಯಲ್ಲಿ ಹೋಂ ಐಸೋಲೇಷನ್​ನಲ್ಲಿ ಇರಿಸಲಾಗಿದ್ದು, ಶೀಘ್ರವೇ ಗುಣಮುಖವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ.

ABOUT THE AUTHOR

...view details