ಚಿತ್ರದುರ್ಗ:ಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಚಿತ್ರದುರ್ಗದಲ್ಲಿ ಎಸ್ಐಗೆ ಕೊರೊನಾ: ಎಸ್ಪಿ ಕಚೇರಿ ಸೀಲ್ ಡೌನ್ - Chitradurga corona latest news
ಚಿತ್ರದುರ್ಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಸ್ಐಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
Chitradurga
ಮಹಾಮಾರಿ ಕೊರೊನಾ ಪೊಲೀಸರನ್ನು ಬೆಂಬಿಡದಂತೆ ಕಾಡುತ್ತಿದ್ದು, ಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 28 ವರ್ಷದ ಎಸ್ಐಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಚೇರಿಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.
ಎಸ್ಐಗೆ ಸೋಂಕು ತಗುಲಿರುವುದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಸೇರಿದಂತೆ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ.