ಚಿತ್ರದುರ್ಗ: ಜಿಲ್ಲೆಯಲ್ಲಿಂದು 66 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,350 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 45 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ 66 ಜನರಿಗೆ ಕೊರೊನಾ ಸೋಂಕು ದೃಢ: ಸೋಂಕಿತರ ಸಂಖ್ಯೆ 1,350 ಕ್ಕೇರಿಕೆ - Chitradurga
ಚಿತ್ರದುರ್ಗ ಜಿಲ್ಲೆಯಲ್ಲಿಂದು 66 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,350 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ಕೋವಿಡ್ ಆಸ್ಪತ್ರೆ
ಚಿತ್ರದುರ್ಗ ತಾಲೂಕಿನಲ್ಲಿ 12, ಹೊಳಲ್ಕೆರೆ-05, ಹಿರಿಯೂರು-20, ಚಳ್ಳಕೆರೆ-22, ಹೊಸದುರ್ಗ-06 ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 01 ಸೇರಿದಂತೆ ಒಟ್ಟು 66 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇಂದು ಒಟ್ಟು 982 ಜನರ ಗಂಟಲು, ಮೂಗಿನ ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವರದಿಯಲ್ಲಿ 66 ಜನರಿಗೆ ಕೋವಿಡ್ ಇರುವುದು ಗೊತ್ತಾಗಿದೆ.
ಸೋಂಕಿತರ ಸಂಖ್ಯೆ 1,350 ಕ್ಕೆ ಏರಿಕೆಯಾಗಿದ್ದರೆ, ಈವರೆಗೆ 18 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 706 ಜನರು ಗುಣಮುಖರಾಗಿ ಬಿಡುಗಡೆ ಆಗಿದ್ದು, ಜಿಲ್ಲೆಯಲ್ಲಿ ಸದ್ಯ 626 ಸಕ್ರಿಯ ಪ್ರಕರಣಗಳಿವೆ.