ಚಿತ್ರದುರ್ಗ: ಕೊರೊನಾ ಭೀತಿ ಸಾರ್ವಜನಿಕರಿಗಲ್ಲದೇ ಇದೀಗ ಚಿತ್ರದುರ್ಗ ಪೊಲೀಸರಿಗೂ ತಟ್ಟಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ಅರೋಗ್ಯ ಜಾಗೃತಿ ಮೂಡಿಸಿದರು.
ಕೊರೊನಾ ವೈರಸ್ ಭೀತಿ: ಪೊಲೀಸರಿಗೆ ಮಾಸ್ಕ್ ವಿತರಿಸಿದ ಎಸ್ಪಿ - ಚಿತ್ರದುರ್ಗದಲ್ಲಿ ಪೊಲೀಸ್ ಅಧಿಕಾರಿಗಳು
ಕೊರೊನಾ ಭೀತಿ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಚಿತ್ರದುರ್ಗದಲ್ಲಿ ಪೊಲೀಸ್ ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ಅರೋಗ್ಯ ಜಾಗೃತಿ ಮೂಡಿಸಿದರು.
ಪೊಲೀಸರಿಗೆ ಮಾಸ್ಕ್ ವಿತರಿಸಿದ ಎಸ್ಪಿ
ಕೊರೊನಾ ವೈರಸ್ ಸೋಂಕು ಹರಡದಂತೆ ಜಿಲ್ಲಾ ಪೊಲೀಸರು ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಡಿಎಚ್ಒ ಪಾಲಾಕ್ಷ, ಎಸ್ಪಿ ರಾಧಿಕಾ ಹಾಗೂ ಪೊಲೀಸ್ ಅಧಿಕಾರಿಗಳು ಭಾಗಿಯಾಗಿ ಜಾಗೃತಿ ಮೂಡಿಸಿದರು.
ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಎಸ್ಪಿ ಜಿ. ರಾಧಿಕಾ ಉದ್ಘಾಟಿಸಿ ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿದರು. ಬಳಿಕ ಯಾರೇ ಸೋಂಕಿತರಾದರೇ ಅಂತಹವರು ತಕ್ಷಣ ಮೇಲ್ಮಟ್ಟದ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಕಿವಿ ಮಾತು ಹೇಳಿದರು.
Last Updated : Mar 19, 2020, 7:30 PM IST