ಚಿತ್ರದುರ್ಗ:ಅಪರಿಚಿತ ಲಾರಿವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಬಳಿ ನಡೆದಿದೆ.
ಹಿಟ್ ಆ್ಯಂಡ್ ರನ್: ಚಳ್ಳಕೆರೆ ಬಳಿ ನವ ವಿವಾಹಿತ ದಂಪತಿ ಬಾಳು ದಾರುಣ ಅಂತ್ಯ! - ಚಿತ್ರದುರ್ಗ ರಸ್ತೆ ಅಪಘಾತ,
ಕೇವಲ ಆರು ತಿಂಗಳ ಹಿಂದೆ ಮದುವೆಯಾಗಿದ್ದ ದಂಪತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ನಗರಂಗೆರೆ ಗ್ರಾಮದ ನಿವಾಸಿ ಸಂದೀಪ (30) ಮತ್ತು ಪತ್ನಿ ಭವ್ಯ (26) ದಂಪತಿ ಕಳೆದ ರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಳ್ಳಕೆರೆಯಿಂದ ಹಿರೇಹಳ್ಳಿ ಕಡೆ ಸಂಚರಿಸುತ್ತಿದ್ದ ಅಪರಿಚಿತ ವಾಹನವೊಂದು ಚಿಕ್ಕಮ್ಮನಹಳ್ಳಿ ಬಳಿ ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕಿಗೆ ಡಿಕ್ಕಿ ಹೊಡೆದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಈ ಘಟನೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು.
ಮೃತಪಟ್ಟ ದಂಪತಿ ಆರು ತಿಂಗಳ ಹಿಂದೆ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ತಳಕು ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.