ಚಿತ್ರದುರ್ಗ:ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆ ಭೀತಿ ಜೋರಾಗಿದೆ. ಈ ನಡುವೆ ಜಿಲ್ಲೆಯ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಕೋವಿಡ್ ನಿಯಮಾವಳಿಗಳು ಮಂಗಮಾಯವಾಗಿತ್ತು.
ಚಿತ್ರದುರ್ಗ: ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಕೋವಿಡ್ ರೂಲ್ಸ್ ಮಂಗಮಾಯ - ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಬ್ರಹ್ಮ ರಥೋತ್ಸವ
ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಬ್ರಹ್ಮ ರಥೋತ್ಸವದಲ್ಲಿ ಜನಜಂಗುಳಿ ಉಂಟಾಗಿದ್ದು, ಕೊರೊನಾ ಮಾರ್ಗಸೂಚಿಗಳ ಪಾಲನೆಯಾಗಿಲ್ಲ.

ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಬ್ರಹ್ಮ ರಥೋತ್ಸವದಲ್ಲಿ ಜಿಲ್ಲಾಡಳಿತದ ನಿಯಮಾವಳಿಯಂತೆ ಸ್ಥಳೀಯರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ, ಹಟ್ಟಿ ತಿಪ್ಪಜ್ಜನ ರಥೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮದವರು ಸೇರಿದಂತೆ ಸಾವಿರಾರು ಜನ ಆಗಮಿಸಿದ್ದಾರೆ. ಇದರಿಂದಾಗಿ ಜನಜಂಗುಳಿ ಉಂಟಾಗಿದ್ದು, ಕೊರೊನಾ ಮಾರ್ಗಸೂಚಿಗಳ ಪಾಲನೆಯಾಗಿಲ್ಲ.
ಕೊರೊನಾ ಎರಡನೇ ಅಲೆ ಭೀತಿ ನಡುವೆಯೂ ಇಷ್ಟೊಂದು ಜನ ಇಲ್ಲಿ ಸೇರಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ನಾವು ಎಲ್ಲಾ ಕೊರೊನಾ ನಿಯಮಾವಳಿಗಳನ್ನು ಪಾಲಿಸಿದ್ದೇವೆ. ಸ್ಥಳೀಯರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಮಾತ್ರ ಜಾತ್ರೆಗೆ ಆಗಮಿಸಿದ್ದಾರೆ ಎಂದು ಹೇಳುತ್ತಿದೆ.