ಚಿತ್ರದುರ್ಗ :ಸಿದ್ದರಾಮಯ್ಯನವರ ಅವಧಿಯಲ್ಲಿನ ಕಾಂಗ್ರೆಸ್ ಸರ್ಕಾರ ಪರ್ಸೆಂಟೇಜ್ ಸರ್ಕಾರವಾಗಿತ್ತು. ತಮ್ಮ ಸರ್ಕಾರದ ಆಡಳಿತ ನೆನೆದು ಆರೋಪ ಮಾಡಿರಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದರು.
ನಗರದ ಮುರುಘಾ ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದರಿಸಿ ಬೆದರಿಸಿ ರಾಜಕಾರಣ ಮಾಡುವುದು ಕನಕಪುರದ ಸ್ಟೈಲ್. ಡೆಮಾಕ್ರಸಿಯಲ್ಲಿ ಹೆದರಿಸಿ ರಾಜಕಾರಣ ಮಾಡೋಕಾಗಲ್ಲ. ಇನ್ನು ಅಟ್ರಾಸಿಟಿ ಹಾಕಿಸುವುದು, ಮನೆ ಮೇಲೆ ಕಲ್ಲು ಹೊಡೆಸುವುದು ನಮ್ಮ ಸಂಸ್ಕೃತಿ ಅಲ್ಲ. ಅದು ಕೂಡ ಕನಕಪುರದ ಸಂಸ್ಕೃತಿ. ಈ ಕನಕಪುರದ ಸಂಸ್ಕೃತಿಯನ್ನು ರಾಜ್ಯಕ್ಕೆ ವಿಸ್ತರಿಸಲು ಅವಕಾಶ ಕೊಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಟಾಂಗ್ ನೀಡಿದರು.