ಚಿತ್ರದುರ್ಗ:ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಕಾರ್ಯ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲವಾಗುವ ಉದ್ದೇಶದಿಂದ ದಾವಣಗೆರೆ ವಿಶ್ವವಿದ್ಯಾನಿಲಯವು ಜಿಲ್ಲಾಡಳಿತಕ್ಕೆ 1.5 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದೆ.
ದಾವಣಗೆರೆ ವಿವಿಯಿಂದ ಚಿತ್ರದುರ್ಗ ಜಿಲ್ಲಾಳಿತಕ್ಕೆ 1.5 ರೂ. ಲಕ್ಷ ದೇಣಿಗೆ - ಚಿತ್ರದುರ್ಗ ಸುದ್ದಿ
ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮತ್ತು ಕುಲಸಚಿವ ಪ್ರೊ. ಬಸವರಾಜ ಬಣಕಾರ ಕೊರೊನಾ ಸೋಂಕು ನಿಯಂತ್ರಣಕ್ಕೆ ಚಿತ್ರದುರ್ಗ ಜಿಲ್ಲಾಡಳಿತ ಕೈಗೊಂಡ ಕಾರ್ಯ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲವಾಗುವ ಉದ್ದೇಶದಿಂದ ಜಿಲ್ಲಾಡಳಿತಕ್ಕೆ 1.5 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ.
ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮತ್ತು ಕುಲಸಚಿವ ಪ್ರೊ. ಬಸವರಾಜ ಬಣಕಾರ, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರಿಗೆ ಚೆಕ್ ನೀಡಿದರು. ಚೆಕ್ ಸ್ವೀಕರಿಸಿದ ಜಿಲ್ಲಾಧಿಕಾರಿ, ದಾವಣಗೆರೆ ವಿಶ್ವವಿದ್ಯಾನಿಲಯವು ಶಿಕ್ಷಣಕ್ಕೆ ಸೀಮಿತವಾಗದೆ ಸಮುದಾಯ ಕಾಳಜಿ ವಹಿಸಿರುವುದು ಶ್ಲಾಘನೀಯ. ಇದು ಎಲ್ಲರಿಗೂ ಮಾದರಿಯಾಗಿದೆ. ಜಿಲ್ಲೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಮತ್ತು ಕೊವಿಡ್-19 ತಡೆಗೆ ನೆರವಿನ ಹಸ್ತ ಚಾಚುವ ಜನರಿಗೆ, ಸಂಘ ಸಂಸ್ಥೆಗಳಿಗೆ ಜಿಲ್ಲಾಡಳಿತ ಆಭಾರಿಯಾಗಿದೆ.
ಜಿಲ್ಲೆಯಲ್ಲಿ ದಿನಸಿ ಕಿಟ್, ಮಾಸ್ಕ್ ಹಾಗೂ ಇನ್ನಿತರ ಸಾಮಗ್ರಿಗಳ ಸಂಗ್ರಹ ಸಾಕಷ್ಟಿದೆ. ರೋಗದ ತಪಾಸಣೆ ಮತ್ತು ವೈದ್ಯರ ಸುರಕ್ಷತೆಗೆ ವೈದ್ಯಕೀಯ ಉಪಕರಣಗಳು ಅಗತ್ಯವಾಗಿದ್ದು, ಅವುಗಳ ಖರೀದಿಗೆ ವಿಶ್ವವಿದ್ಯಾನಿಲಯ ನೀಡಿದ ಕೊಡುಗೆಯನ್ನ ಬಳಸಿಕೊಳ್ಳಲಾಗುವುದು ಎಂದರು.