ಚಿತ್ರದುರ್ಗ: ಕಳೆದ ಎರಡು ತಿಂಗಳಿನಿಂದ ಕೊರೊನಾ ತಡೆಗೆ ಜಿಲ್ಲಾಡಳಿತ ಏನೆಲ್ಲ ಸಿದ್ಧತೆ ಮಾಡಿಕೊಂಡಿತ್ತು ಹಾಗೂ ಪ್ರಸ್ತುತ ಯಾವೆಲ್ಲ ಕ್ರಮಗಳನ್ನು ಅನುಸರಿಸುತ್ತಿದೆ ಎಂಬುದರ ಕುರಿತು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 1,140 ಆಕ್ಸಿಜನ್ ಬೆಡ್ಗಳಿದ್ದು, ಅವುಗಳನ್ನು 20 ಕೋವಿಡ್ ಕೇರ್ ಸೆಂಟರ್ ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬಳಕೆ ಮಾಡಲಾಗುತ್ತಿದೆ. ಪ್ರತಿ ತಾಲ್ಲೂಕಿನಲ್ಲಿ 50 ಆಕ್ಸಿಜನ್ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರು ಹೆಚ್ಚಾಗುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಹಾಗೂ ಬೆಡ್ಗಳ ಕೊರತೆ ಎದುರಾಗುತ್ತಿತ್ತು. ಅದನ್ನು ನೀಗಿಸಲು ಸೋಂಕಿತರಿಗೆ ವಿವಿಧ ಕೋವಿಡ್ ಕೇರ್ ಸೆಂಟರ್ಗಳಲ್ಲೂ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲಿ ಚಿಕಿತ್ಸೆ ಪಡೆಯತಕ್ಕದ್ದು ಎಂದು ಜನರಲ್ಲಿ ಮನವಿ ಮಾಡಿದರು.