ಚಿತ್ರದುರ್ಗ: ಡಿಕೆಶಿ ವಿಚಾರದಲ್ಲಿ ಇಡಿ ತನಿಖೆ ನಡೆಯುತ್ತಿರುವುದರಿಂದ ನಾನು ಪ್ರತಿಕ್ರಿಯಿಸುವುದಿಲ್ಲ. ಐಟಿ, ಇಡಿ ತನಿಖೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ.
ಡಿಕೆಶಿ ಬಂಧನಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಡಿಸಿಎಂ ಗೋವಿಂದ ಕಾರಜೋಳ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗೇಟ್ ಬಳಿ ನಿರ್ಮಾಣ ಹಂತದಲ್ಲಿರುವ ವಸತಿ ಶಾಲಾ-ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಇಡಿ ಬಂಧನದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ನೂತನ ಮೋಟಾರು ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗುಜರಾತ್ ಮಾದರಿಯಲ್ಲಿ ದಂಡ ವಿನಾಯಿತಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ದುಬಾರಿ ದಂಡಕ್ಕೆ ನನ್ನ ಸಹಮತವೂ ಇಲ್ಲ, ನಾನೂ ವಿರೋಧಿಸುತ್ತೇನೆ. ದೇಶದಲ್ಲಿ ಸುರಕ್ಷತೆ ದೃಷ್ಟಿಯಿಂದ ವಾಹನ ಕಾಯ್ದೆ ತಿದ್ದುಪಡಿ ತರಲಾಗಿದೆ ಎಂದರು.
ಪ್ರತಿದಿನ 10 ಸಾವಿರ ರಸ್ತೆ ಅಪಘಾತಗಳು ನಡೆಯುತ್ತಿದ್ದು, ರಸ್ತೆಗಳು ಚನ್ನಾಗಿರೋ ಕಾರಣದಿಂದಲೇ ಅಪಘಾತ ಹೆಚ್ಚಾಗುತ್ತಿವೆ. ರಸ್ತೆಗಳು ಅಭಿವೃದ್ಧಿಯಾಗಿ ಅಪಘಾತಗಳು ಹೆಚ್ಚಾಗುತ್ತಿವೆ. ದುಬಾರಿ ದಂಡ ವಿರೋಧಿಸುತ್ತೇನೆ, ಆದ್ರೆ ರಸ್ತೆ ಸುರಕ್ಷತೆ ಇಲ್ಲ ಅನ್ನೋದನ್ನ ಒಪ್ಪೋದಿಲ್ಲ ಎಂದರು.