ಚಿತ್ರದುರ್ಗ:ನಾಳೆಯಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಡಿಡಿಪಿಐ ರವಿಶಂಕರ್ ರೆಡ್ಡಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚಿತ್ರದುರ್ಗ: ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಭೇಟಿ, ಪರಿಶೀಲನೆ - ಡಿಡಿಪಿಐ ಭೇಟಿ ನೀಡಿ ಪರಿಶೀಲನೆ
ನಾಳೆ ನಗರದ 97 ಪರೀಕ್ಷಾ ಕೇಂದ್ರಗಳಲ್ಲಿ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ ಮಾಡಿದ್ದಾರೋ, ಇಲ್ಲವೋ ಎಂದು ಡಿಡಿಪಿಐ ರವಿಶಂಕರ್ ರೆಡ್ಡಿ ನಗರದ ಬಾಲಕಿಯರ ಕಾಲೇಜಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿ ಮಾಹಿತಿ ಕಲೆಹಾಕಿದರು.

ಡಿಡಿಪಿಐ ಭೇಟಿ
ನಾಳೆ ಜಿಲ್ಲೆಯಾದ್ಯಂತ 97 ಪರೀಕ್ಷಾ ಕೇಂದ್ರಗಳಲ್ಲಿ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ ಮಾಡಿದ್ದಾರೋ, ಇಲ್ಲವೋ ಎಂದು ಡಿಡಿಪಿಐ ರವಿಶಂಕರ್ ರೆಡ್ಡಿ ನಗರದ ಬಾಲಕಿಯರ ಕಾಲೇಜಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿ ಮಾಹಿತಿ ಕಲೆಹಾಕಿದರು.
ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಭೇಟಿ
ಪ್ರತಿ ವಿದ್ಯಾರ್ಥಿಗೆ ಕನಿಷ್ಠ ನಾಲ್ಕು ಅಡಿ ಅಂತರ ಇರ್ಬೇಕು. ಆ ರೀತಿ ಡೆಸ್ಕ್ಗಳನ್ನು ಹಾಕಿ, ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸ್ಥಳೀಯ ಸಿಬ್ಬಂದಿಗೆ ತಾಕೀತು ಮಾಡಿದರು.