ಚಿತ್ರದುರ್ಗ:ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಪಡಿತರ ವಿತರಣೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ಡಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವರು, ಬಿಪಿಎಲ್ ಅರ್ಜಿ ಹಾಕಿರುವ ಕುಟುಂಬಗಳಿಗೂ ಪಡಿತರ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ 1 ಲಕ್ಷ 88 ಸಾವಿರ ಬಿಪಿಎಲ್ ಕಾರ್ಡುದಾರರ ಅರ್ಜಿ ಪೆಂಡಿಂಗ್ ಇದ್ದವು. ಅದರೆ, ಸಿಎಂ ಯಡಿಯೂರಪ್ಪನವರ ಸೂಚನೆ ಮೇರೆಗೆ ಅವರೆಲ್ಲರಿಗೂ ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದರು.
ಇನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಜಿಲ್ಲೆಗಳಲ್ಲಿ ಈ ರೀತಿ ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ತಕ್ಷಣ ನ್ಯಾಯಬೆಲೆ ಅಂಗಡಿ ಮಾಲೀಕ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನು ರಾಜ್ಯದಲ್ಲಿ 14 ಸಾವಿರ ಎಪಿಎಲ್ ಕಾರ್ಡುದಾರರಿದ್ದು, ಅವರಿಗೂ ಸಹ ಎರಡು ತಿಂಗಳಿನ ಅಕ್ಕಿಯನ್ನು 15 ರೂಪಾಯಿಯಂತೆ ವಿತರಣೆ ಮಾಡಲಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ರಾಜ್ಯದಲ್ಲಿ 146 ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳಲಾಗಿದೆ ಎಂದರು.