ಚಿತ್ರದುರ್ಗ:ವರದಕ್ಷಿಣೆ ಕಿರುಕುಳ ಆರೋಪದ ಹಿನ್ನೆಲೆ, ಗೃಹಿಣಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಟಪ್ಪನ ಹಟ್ಟಿಯಲ್ಲಿ ನಡೆದಿದೆ.
ವರದಕ್ಷಿಣೆ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆ - ಕಾಟಪ್ಪನ ಹಟ್ಟಿಯಲ್ಲಿ ಗೃಹಿಣಿ ಆತ್ಮಹತ್ಯೆ
ಮದುವೆಯಾಗಿ ಒಂದೇ ವರ್ಷಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದು, ಗಂಡನ ಮನೆಯವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳದಿಂದಾಗಿ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ಗೃಹಿಣಿ ಆತ್ಮಹತ್ಯೆ
ಶಿಲ್ಪಾ (26) ಆತ್ಮಹತ್ಯೆಗೆ ಶರಣಾದ ನೊಂದ ಮಹಿಳೆ. ಕಳೆದ ಒಂದು ವರ್ಷದ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಮೃತ ಶಿಲ್ಪಾ, ಚಳ್ಳಕೆರೆ ಪಟ್ಟಣದ ಕಾಟಪ್ಪನಹಟ್ಟಿಯ ನಿವಾಸಿ ಪ್ರಕಾಶ್ ಎಂಬುವನ ಕೈ ಹಿಡಿದಿದ್ದಳು. ಕಳೆದ ಒಂದು ವರ್ಷದಿಂದಲೂ ನನ್ನ ಮಗಳಿಗೆ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪ ಮಾಡಿದ್ದಾರೆ.
ಮಾಹಿತಿ ಆಧರಿಸಿ ಚಳ್ಳಕೆರೆ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ.