ಕರ್ನಾಟಕ

karnataka

ETV Bharat / state

2024ರೊಳಗೆ ರಾಜ್ಯದ 90 ಲಕ್ಷ ಮನೆಗಳಿಗೆ ನಳನೀರು ಸಂಪರ್ಕ: ಕೆ.ಎಸ್​.ಈಶ್ವರಪ್ಪ - ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ 2024ರೊಳಗೆ ರಾಜ್ಯದ 90 ಲಕ್ಷ ಮನೆಗಳಿಗೆ ನಳ ನೀರು ಸಂಪರ್ಕ

ಚಿತ್ರದುರ್ಗ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 6,865 ಮನೆಗಳಿಗೆ ನಳ ಸಂಪರ್ಕಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಜನವರಿ-2022ರ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

2024ರೊಳಗೆ ರಾಜ್ಯದ 90 ಲಕ್ಷ ಮನೆಗಳಿಗೆ ನಳನೀರು ಸಂಪರ್ಕ
2024ರೊಳಗೆ ರಾಜ್ಯದ 90 ಲಕ್ಷ ಮನೆಗಳಿಗೆ ನಳನೀರು ಸಂಪರ್ಕ

By

Published : Nov 3, 2021, 6:53 PM IST

ಚಿತ್ರದುರ್ಗ: ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ 2024ರೊಳಗೆ ರಾಜ್ಯದ 90 ಲಕ್ಷ ಮನೆಗಳಿಗೆ ನಳ ನೀರು ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮುತ್ತುಗದೂರು ಗ್ರಾಮದಲ್ಲಿ ನಡೆದ ಜಲಜೀವನ್ ಮಿಷನ್ ಯೋಜನೆಯಡಿ ನಿರ್ವಹಿಸಿರುವ ಕಾರ್ಯಾತ್ಮಕ ನಳ ನೀರು ಸಂಪರ್ಕದ ಕಾಮಗಾರಿ ವೀಕ್ಷಣೆ ಮಾಡಿದವರು. ಪ್ರತಿ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವುದು ಜಲ ಜೀವನ ಮಿಷನ್ ಯೋಜನೆಯ ಪ್ರಮುಖ ಉದ್ದೇಶವಾಗಿದ್ದು, ಈಗಾಗಲೇ ಕಾಮಗಾರಿ ನಡೆಯುತ್ತಿದೆ ಎಂದರು.

2024ರೊಳಗೆ ರಾಜ್ಯದ 90 ಲಕ್ಷ ಮನೆಗಳಿಗೆ ನಳನೀರು ಸಂಪರ್ಕ

ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಶೇ.50ರ ಅನುಪಾತದಲ್ಲಿ ಕ್ರಿಯಾ ಯೋಜನೆ ತಯಾರಿಸಲಾಗಿದ್ದು, 2024ರೊಳಗೆ ರಾಜ್ಯದ 90 ಲಕ್ಷ ಮನೆಗಳಿಗೆ ನಳನೀರು ಸಂಪರ್ಕಿಸುವ ಕಾಮಗಾರಿ ಮುಕ್ತಾಯಗೊಳಿಸಲಾಗುವುದು ಎಂದು ಹೇಳಿದರು.

ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮುರು, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕು ಸೇರಿದಂತೆ ಒಟ್ಟು ಆರು ತಾಲೂಕುಗಳಿಂದ ರೂ.516 ಕೋಟಿಯಷ್ಟು ಕಾಮಗಾರಿಗಳಿಗೆ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯ 3,46,186 ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಕಾಮಗಾರಿ ಶುರವಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 6,865 ಮನೆಗಳಿಗೆ ನಳ ಸಂಪರ್ಕಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಜನವರಿ-2022ರ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ABOUT THE AUTHOR

...view details