ಚಿತ್ರದುರ್ಗ: ಕುಡಿದ ಅಮಲಿನಲ್ಲಿ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟು ನಾಶ ಮಾಡಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ
ಕಾಲ್ಕೆರೆ ಲಂಬಾಣಿಹಟ್ಟಿಯಲ್ಲಿ ನಡೆದಿದೆ.
ಕುಡುಕರ ಕೃತ್ಯಕ್ಕೆ ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳ ಭಸ್ಮ - latest chitradurga news
ಚಿತ್ರದುರ್ಗದ ಚಳ್ಕೆರೆಯಲ್ಲಿ ಕುಡಿದ ಅಮಲಿನಲ್ಲಿದ್ದ ಕುಡುಕರು ಮೆಕ್ಕೆಜೋಳದ ರಾಶಿಗೆ ಬೆಂಕಿ ಹಚ್ಚಿದ್ದು, ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ.
ಕುಡುಕರ ಕೃತ್ಯಕ್ಕೆ ಲಕ್ಷಾಂತರ ರೂ. ಮೆಕ್ಕೆ ಜೋಳ ಭಸ್ಮ
ಕುಡುಕರು ಮಾಡಿರುವ ದುಷ್ಕೃತ್ಯಕ್ಕೆ ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದ್ದು, ರೈತನ ಆಕ್ರಂದನ ಮುಗಿಲು ಮುಟ್ಟಿದೆ. ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ರೈತರು ಪೊಲೀಸರಿಗೆ ಆಗ್ರಹಿಸಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.