ಚಿತ್ರದುರ್ಗ: ಮತದಾನಕ್ಕೆ ಕೇವಲ 3 ದಿನ ಬಾಕಿ ಉಳಿದಿವೆ. ಹಾಗಾಗಿ ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿಯೂ ಚುನಾವಣಾ ಕಾವು ಜೋರಾಗಿದೆ.
ಕೈ-ಕಮಲ ಕಲಿಗಳ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದ್ದು, ಬಿಜೆಪಿಯ ಎ. ನಾರಾಯಣಸ್ವಾಮಿ ಹಾಗೂ ಮೈತ್ರಿ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ಹಿರಿಯೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿಯಿಂದ ಮತಯಾಚನೆ ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿ ಜಿಲ್ಲೆಯ ಹಿರಿಯೂರಿನಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನೇತೃತ್ವದಲ್ಲಿ ಸಭೆ ನಡೆಸಿ ಮತಯಾಚಿಸಿದರು. ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ, ಬಿಜೆಪಿ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಎ. ನಾರಾಯಣ ಸ್ವಾಮಿ, ದೇಶವನ್ನು ರಕ್ಷಣೆ ಮಾಡುತ್ತಿರುವುದು ಪ್ರಧಾನಿ ಮೋದಿಯವರು ಮಾತ್ರ. ಕಳಂಕ ರಹಿತ ಆಡಳಿತ ನೀಡಿದ ಪ್ರಧಾನಿ ಅಂದ್ರೇ ಅದು ನರೇಂದ್ರ ಮೋದಿ. ಅಂತಹವರಿಗೆ ನೀವು ಮತವನ್ನು ನೀಡಬೇಕು ಎಂದರು.