ಚಿತ್ರದುರ್ಗ: ಅಗ್ನೇಯ ಪದವಿಧರ ಕ್ಷೇತ್ರದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣಾ ಆಯೋಗವು ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 29 ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು.
ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆ: ನೀತಿ ಸಂಹಿತೆ ಜಾರಿ
ಆಗ್ನೇಯ ಪದವಿಧರ ಕ್ಷೇತ್ರವು ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳನ್ನು ಒಳಗೊಂಡಿದ್ದು, ಅಕ್ಟೋಬರ್ 01 ರಿಂದ 8ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 9 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ.
ಆಗ್ನೇಯ ಪದವಿಧರ ಕ್ಷೇತ್ರವು ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳನ್ನು ಒಳಗೊಂಡಿದ್ದು, ಅಕ್ಟೋಬರ್ 01 ರಿಂದ 8ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 9 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 12 ಕ್ಕೆ ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 28 ಕ್ಕೆ ಆಗ್ನೇಯ ಮತಕ್ಷೇತ್ರಕ್ಕೆ ಮತದಾನ ನಡೆಯಲಿದೆ.
ನವೆಂಬರ್ 02 ರಂದು ಮತ ಎಣಿಕೆ ನಡೆಯಲಿದ್ದು, ನವಂಬರ್ 5 ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ. ಅಲ್ಲಿಯವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಮಾಹಿತಿ ನೀಡಿದರು.