ಕರ್ನಾಟಕ

karnataka

ETV Bharat / state

ಜನಗಣತಿಯಲ್ಲಿ ನಿಖರ ಮಾಹಿತಿ ಸಂಗ್ರಹಕ್ಕೆ ಒತ್ತು ನೀಡಿ: ಅಧಿಕಾರಿಗಳಿಗೆ ಡಿಸಿ ಸೂಚನೆ - ಡಿಸಿ ವಿನೋತ್ ಪ್ರಿಯಾ ಸೂಚನೆ

2020-21ನೇ ಭಾರತೀಯ ಜನಗಣತಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಜನಗಣತಿ ಮತ್ತು ಎನ್‍ಪಿಆರ್ (ರಾಷ್ಟ್ರೀಯ ಜನಸಂಖ್ಯಾ ನೋಂದಣಿ)ಯನ್ನು ಯಾವುದೇ ಗೊಂದಲವಿಲ್ಲದೆ, ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

DC Vinoth  Priya notice
ಜನಗಣತಿಯಲ್ಲಿ ನಿಖರ ಮಾಹಿತಿ ಸಂಗ್ರಹಕ್ಕೆ ಒತ್ತು ನೀಡಿ..ಡಿಸಿ ಸೂಚನೆ

By

Published : Feb 24, 2020, 8:08 PM IST

ಚಿತ್ರದುರ್ಗ: 2020-21ನೇ ಭಾರತೀಯ ಜನಗಣತಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಜನಗಣತಿ ಮತ್ತು ಎನ್‍ಪಿಆರ್ (ರಾಷ್ಟ್ರೀಯ ಜನಸಂಖ್ಯಾ ನೋಂದಣಿ)ಯನ್ನು ಯಾವುದೇ ಗೊಂದಲವಿಲ್ಲದೆ, ವ್ಯವಸ್ಥಿತವಾಗಿ ನಿರ್ವಹಿಸಬೇಕು. ನಿಖರ ಮಾಹಿತಿ ಸಂಗ್ರಹಕ್ಕೆ ಗಣತಿದಾರರು ಒತ್ತು ನೀಡಬೇಕು ಎಂದು ಪ್ರಧಾನ ಜಿಲ್ಲಾ ಜನಗಣತಿ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನಗಣತಿಯಲ್ಲಿ ನಿಖರ ಮಾಹಿತಿ ಸಂಗ್ರಹಕ್ಕೆ ಒತ್ತು ನೀಡಿ: ಡಿಸಿ ಸೂಚನೆ

ಜಿಲ್ಲಾಡಳಿತದ ವತಿಯಿಂದ ನಗರದ ಪಿಡಬ್ಲೂಡಿ ಸಭಾಂಗಣದಲ್ಲಿ ಜನಗಣತಿ ಮತ್ತು ಎನ್‍ಪಿಆರ್ 2021ರ ಜಿಲ್ಲೆಯ ಎಲ್ಲಾ ಜನಗಣತಿ ಚಾರ್ಜ್ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಥಮ ಹಂತವಾಗಿ 2020ರ ಏಪ್ರಿಲ್ 15ರಿಂದ ಮೇ 29ರವರೆಗೆ ಮನೆ ಗಣತಿ ಹಾಗೂ ಮನೆ ಪಟ್ಟಿ ಕಾರ್ಯ ನಡೆಯಲಿದೆ. ಮನೆಗಳಿಗೆ ಭೇಟಿ ನೀಡುವ ಗಣತಿದಾರರಿಗೆ ಸಾರ್ವಜನಿಕರು ಅಗತ್ಯ ಮಾಹಿತಿ ನೀಡುವ ಮೂಲಕ ಸಹಕಾರ ನೀಡಬೇಕು. ಗಣತಿದಾರರು ಸಹ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ, ಸಾರ್ವಜನಿಕರಿಂದ ಸಂಪೂರ್ಣ ಹಾಗೂ ನಿಖರ ಮಾಹಿತಿ ಪಡೆದುಕೊಳ್ಳಬೇಕು ಎಂದರು.

ABOUT THE AUTHOR

...view details