ಚಿತ್ರದುರ್ಗ: ರಾಜ್ಯದಲ್ಲಿ ಸಂಪುಟ ವಿಸ್ತರಣೆ ವಿಚಾರ ಇದೀಗ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಜಿಲ್ಲೆಯಲ್ಲಿ ಶಾಸಕ ತಿಪ್ಪಾರೆಡ್ಡಿ ಹಾಗೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.
ಸಚಿವರಾಗಬೇಕು ಎಂದು ಪ್ರತಿಯೊಬ್ಬರಿಗೂ ಆಸೆ ಇರುತ್ತೆ: ಶಾಸಕಿ ಪೂರ್ಣಿಮಾ ಶ್ರೀನಿವಾಸ್
ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಸಚಿವರಾಗಬೇಕು ಎಂದು ಪ್ರತಿಯೊಬ್ಬರಿಗೂ ಆಸೆ ಇರುತ್ತದೆ. ಸಚಿವ ಸಂಪುಟದಲ್ಲಿ ಮಹಿಳೆಯರಿಗೂ ಅವಕಾಶ ಕೊಡಬೇಕು ಎಂದು ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದರು.
ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕಿ ಪೂರ್ಣಿಮಾ, ಖಂಡಿತವಾಗಿಯೂ ಸಚಿವರಾಗಬೇಕು ಎಂದು ಪ್ರತಿಯೊಬ್ಬರಿಗೂ ಆಸೆ ಇರುತ್ತೆ. ಪಕ್ಷ ಹಾಗೂ ನಮ್ಮ ಮುಖ್ಯಮಂತ್ರಿ ಏನು ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಇಡೀ ರಾಜ್ಯದಲ್ಲಿ ನಮ್ಮ ಸಮುದಾಯದ ಏಕೈಕ ಮಹಿಳಾ ಶಾಸಕಿ ನಾನಾಗಿರೋದ್ರಿಂದ ನನಗೆ ವಿಶ್ವಾಸವಿದ್ದು, ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡುವ ನಂಬಿಕೆಯಿದೆ. ಆದರೂ ಸರ್ಕಾರದ ನಿರ್ಧಾರಕ್ಕೆ ನಾನು ಬದ್ಧಳಾಗಿರುತ್ತೇನೆ ಎಂದರು. ಇದೇ ವೇಳೆ ಸಚಿವ ಸಂಪುಟದಲ್ಲಿ ಮಹಿಳೆಯರಿಗೂ ಅವಕಾಶ ಕೊಡಬೇಕು ಎಂದು ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದರು.