ಕರ್ನಾಟಕ

karnataka

ETV Bharat / state

ಕಾಡು ಹಂದಿಗೆ ಡಿಕ್ಕಿ ಹೊಡೆದ ಕಾರು ; ಮೂವರು ಸ್ಥಳದಲ್ಲೇ ಸಾವು, ಹಲವರ ಸ್ಥಿತಿ ಗಂಭೀರ - Accident 3 died

ದಾವಣಗೆರೆಯಲ್ಲಿ ನಡೆಯುತ್ತಿದ್ದ ದುರ್ಗಾದೇವಿ ಜಾತ್ರೆಯಲ್ಲಿ ಭಾಗಿಯಾಗಲು ಪ್ರಯಾಣಿಸುತ್ತಿದ್ದ ವೇಳೆ ಕಾರ್​ವೊಂದು ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿದ್ದಾರೆ..

chitradurga accident
ಕಾಡು ಹಂದಿಗೆ ಡಿಕ್ಕಿ ಹೊಡೆದ ಕಾರು, ಮೂವರು ದುರ್ಮರಣ

By

Published : Mar 16, 2022, 2:45 PM IST

ಚಿತ್ರದುರ್ಗ :ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾಡುಹಂದಿಗೆ ಕಾರ್​ವೊಂದು ಡಿಕ್ಕಿ ಹೊಡೆದಿರುವ ಪರಿಣಾಮ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಉಳಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂವರು ಸ್ಥಳದಲ್ಲೇ ಸಾವು, ಹಲವರ ಸ್ಥಿತಿ ಗಂಭೀರ

ಚಿತ್ರದುರ್ಗ ಜಿಲ್ಲೆಯ ಐಮಂಗಲ ಬಳಿ ಈ ಘಟನೆ ನಡೆದಿದೆ. ಕಾರಲ್ಲಿದ್ದ ಮತ್ತೆ ಮೂವರಿಗೆ ಗಂಭೀರವಾದ ಗಾಯಾಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರು ಬೆಂಗಳೂರಿನಿಂದ ದಾವಣಗೆರೆ ನಗರದಲ್ಲಿ ನಡೆಯುತ್ತಿದ್ದ ದುರ್ಗಾದೇವಿ ಜಾತ್ರೆಗಾಗಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣ ಬೆಳೆಸುತ್ತಿದ್ದರು. ರಸ್ತೆಯಲ್ಲಿ ದಿಢೀರ್​ ಆಗಿ ಕಾರು ಹಂದಿ ಅಡ್ಡ ಬಂದಿರುವ ಪರಿಣಾಮ ಕಾರು ಚಾಲಕ ಅದಕ್ಕೆ ಡಿಕ್ಕಿ ಹೊಡೆದಿದ್ದು, ನಂತರ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಡು ಹಂದಿಗೆ ಡಿಕ್ಕಿ ಹೊಡೆದ ಕಾರು, ಮೂವರು ದುರ್ಮರಣ

ಕಳೆದ ವಾರ ಕೂಡ ಈ ಹೆದ್ದಾರಿಯಲ್ಲಿ ಕಾರ್​ವೊಂದು ಚಿರತೆಗೆ ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.

ABOUT THE AUTHOR

...view details