ಚಿತ್ರದುರ್ಗ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಮಗುವಿಗೆ ವಿಷವುಣಿಸಿ ತಾನೂ ಕೂಡ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೋಡಿಹಳ್ಳಿ ಗ್ರಾಮದ ಮಹಿಳೆ ವನಿತಾ ತುಮಕೂರು ನಗರದ ಬಸವೇಶ್ವರ ನಗರದಲ್ಲಿದ್ದಾರೆ. ತವರು ಮನೆಗೆ ಬಂದ ಸಮಯದಲ್ಲಿ ಈ ಘಟನೆ ನಡೆದಿದೆ. 4 ವರ್ಷದ ಮಗು ಚಾರ್ವಿತ್ ಸಾವಿಗೀಡಾಗಿದ್ದು, ತಾಯಿ ವನಿತಾ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗದಲ್ಲಿರುವ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.