ಕರ್ನಾಟಕ

karnataka

ETV Bharat / state

ಕೃಷಿ ಕಾಯ್ದೆಗೆ ವಿರೋಧ: ಚಿತ್ರದುರ್ಗದಲ್ಲಿ ರೈತ ಮುಖಂಡರಿಂದ ಉಪವಾಸ ಸತ್ಯಾಗ್ರಹ - hunger strik

ಕೃಷಿ ಕಾಯ್ದೆ ವಿರೋಧಿಸಿ ರೈತ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

Chitradurga
ಚಿತ್ರದುರ್ಗದಲ್ಲಿ ರೈತ ಮುಖಂಡರಿಂದ ಉಪವಾಸ ಸತ್ಯಾಗ್ರಹ

By

Published : Jan 30, 2021, 3:34 PM IST

ಚಿತ್ರದುರ್ಗ:ಕೇಂದ್ರ ಸರ್ಕಾರ ರೈತರ ವಿರೋಧಿ ಕಾಯ್ದೆಗಳನ್ನ ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ‌ ನಡೆಸುತ್ತಿದ್ದಾರೆ.

ಚಿತ್ರದುರ್ಗದಲ್ಲಿ ರೈತ ಮುಖಂಡರಿಂದ ಉಪವಾಸ ಸತ್ಯಾಗ್ರಹ

ಮಹಾತ್ಮಾ ಗಾಂಧಿ ಹುತಾತ್ಮ ದಿನಾಚರಣೆ ನಿಮಿತ್ತ ರೈತ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ಕೃಷಿ ಕಾನೂನು ರದ್ದುಗೊಳಿಸಬೇಕು. ಕೇಂದ್ರ ಸರ್ಕಾರ ರೈತರ ಪರವಾಗಿ ಮಾತನಾಡದೇ ಭಯೋತ್ಪಾದಕರ ಪಟ್ಟ ಕಟ್ಟಲು ಹೊರಟಿದೆ ಎಂದು ಪ್ರತಿಭಟನಾಕಾರು ದೂರಿದರು.

ಇನ್ನು ರಾಷ್ಟ ರಾಜಧಾನಿಯಲ್ಲಿ ಕಳೆದ 2 ತಿಂಗಳಿನಿಂದ ರೈತರು ಹೋರಾಟ ಮಾಡುತ್ತಿದ್ದಾರೆ‌. ಇದುವರೆಗೂ ಸರ್ಕಾರ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಆದ್ರೆ ರೈತರಿಗೆ ಮಾರಕವಾಗಿರುವ ಕಾನೂನು ಹಿಂಪಡೆಯಲು ಮುಂದಾಗುತ್ತಿಲ್ಲ ಎಂದು ರೈತ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details