ಚಿತ್ರದುರ್ಗ :ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಾವಲಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರಿಯಪ್ಪ(60) ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತ.
ಮಳೆಯಿಲ್ಲದೆ ಬೆಳೆ ನಾಶ.. ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ! - ಚಾವಲಹಳ್ಳಿ ರೈತ ಸಾವು
2 ಲಕ್ಷ ರೂ. ಬ್ಯಾಂಕ್ ಸಾಲ ಮಾಡಿಕೊಂಡಿದ್ದ ರೈತ 3 ಎಕರೆಯಲ್ಲಿ ಬಿತ್ತಿದ್ದ ಬೆಳೆ ಮಳೆಯಿಲ್ಲದೆ ನಾಶವಾಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ
ಚಾವಲಿಹಳ್ಳಿ ಗ್ರಾಮದ ನಿವಾಸಿ ರೈತ ಕರಿಯಪ್ಪ ಮೂರು ದಿನದ ಹಿಂದೆ ವಿಷ ಸೇವಿಸ ಅಸ್ವಸ್ಥನಾಗಿದ್ದ. ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.2 ಲಕ್ಷ ರೂ. ಬ್ಯಾಂಕ್ ಸಾಲ ಮಾಡಿಕೊಂಡಿದ್ದ ರೈತ, 3 ಎಕರೆಯಲ್ಲಿ ಬಿತ್ತಿದ್ದ ಬೆಳೆ ಮಳೆಯಿಲ್ಲದೆ ನಾಶವಾಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.