ಚಿತ್ರದುರ್ಗ: ಸಣ್ಣ ಹಾಗೂ ಅತಿ ಸಣ್ಣ ರೈತರನ್ನು ಸಂಕಷ್ಟಕ್ಕೆ ದೂಡುವ ಭೂ ಸುಧಾರಣಾ ಕಾಯ್ದೆಯನ್ನು ಸಂಸತ್ನಲ್ಲಿ ಮಂಡಿಸಿದ್ದನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕರವೇ ಹಾಗೂ ಅಖಂಡ ಕರ್ನಾಟಕ ರೈತ ಸಂಘದಿಂದ ಪ್ರತಿಭಟಿಸಲಾಯಿತು.
ಭೂ ಸುಧಾರಣ ಕಾಯ್ದೆ ಮಂಡನೆ: ಕರವೇ ಸೇರಿದಂತೆ ರೈತ ಸಂಘದಿಂದ ಪ್ರತಿಭಟನೆ - ಅಖಂಡ ಕರ್ನಾಟಕ ರೈತ ಸಂಘ ಪ್ರತಿಭಟನೆ
ಸಂಸತ್ನಲ್ಲಿ ಮಂಡನೆಯಾದ ಭೂ ಸುಧಾರಣಾ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿವೆ.
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನ ಮೆರವಣಿಗೆ ಡಿಸಿ ವೃತ್ತ ತಲುಪಿತು. ಪ್ರತಿಭಟನಾ ಮೆರವಣಿಗೆಯಲ್ಲಿ ರೈತರು ಹಾಗೂ ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ರು. ಸಂಸತ್ನಲ್ಲಿ ಮಂಡನೆಯಾದ ಭೂ ಸುಧಾರಣಾ ಕಾಯ್ದೆಯನ್ನು ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಬಳಿಕ ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮುಖೇನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರ ವಿರೋಧಿ ಕಾಯ್ದೆಗೆ ದೇಶಾದಂತ್ಯ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದರು. ಇದೀಗ ಸಂಸತ್ನಲ್ಲಿ ಕಾಯ್ದೆ ಮಂಡಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.