ಕರ್ನಾಟಕ

karnataka

By

Published : Nov 13, 2020, 12:14 PM IST

ETV Bharat / state

ಅಗ್ನಿ ಆಕಸ್ಮಿಕ: ಚಿಕ್ಕಜಾಜೂರಿನಲ್ಲಿ 10ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗಾಹುತಿ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದ ಕಾಲೊನಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು 10ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.

fire in chikkajajuru
ಆಕಸ್ಮಿಕ ಬೆಂಕಿ

ಚಿತ್ರದುರ್ಗ:ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಹತ್ತಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಜಾಜೂರಿನಲ್ಲಿ ನಡೆದಿದೆ.

ಹತ್ತಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗಾಹುತಿ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದ ಎಸ್​​ಸಿ ಕಾಲೊನಿಯಲ್ಲಿ ಅಗ್ನಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಬೆಂಕಿಯ ಕೆನ್ನಾಲಿಗೆಗೆ ಗುಡಿಸಲುಗಳಲ್ಲಿದ್ದ ಗೃಹ ಬಳಕೆ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ‌ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ಸಂಬಂಧ ಚಿಕ್ಕಜಾಜೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details