ಬೀದಿ ನಾಟಕ ವೀಕ್ಷಣೆ ವೇಳೆ ಬೆಂಕಿ ಅವಘಡ: ಏಳು ಜನರಿಗೆ ಗಾಯ - Street drama in chitradurga
10:55 January 07
ಬೀದಿ ನಾಟಕ ವೀಕ್ಷಣೆ ವೇಳೆ ಸಂಭವಿಸಿದ ಬೆಂಕಿ ಅವಘಡಲ್ಲಿ ಏಳು ಜನರು ಗಾಯಗೊಂಡಿದ್ದಾರೆ.
ಚಿತ್ರದುರ್ಗ:ಬೀದಿ ನಾಟಕ ವೀಕ್ಷಣೆ ವೇಳೆ ಬೆಂಕಿ ಅವಘಡ ಸಂಭವಿಸಿ ಏಳು ಜನ ಗಾಯಗೊಂಡ ಘಟನೆ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ತಳಕು ಗ್ರಾಮದಲ್ಲಿ ಏರ್ಪಡಿಸಿದ್ದ ಬೀದಿ ನಾಟಕ ನಾಟಕ ವೀಕ್ಷಣೆಗೆ ಗ್ರಾಮದ ನೂರಾರು ಜನರು ಜಮಾವಣೆಗೊಂಡಿದ್ದರು. ಆಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಗ್ರಾಮದ ಏಳು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಗಾಯಾಳುಗಳನ್ನ ಚಳ್ಳಕೆರೆ ಹಾಗೂ ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.