ಚಿತ್ರದುರ್ಗ: ಫುಡ್ ಪಾಯಿಸನ್ನಿಂದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಹನುಮಂತ ದೇವರ ಕಣಿವೆಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ನಡೆದಿದೆ. ಬೆಳಗ್ಗೆ ಉಪಹಾರ ಸೇವಿಸಿದ ಬಳಿಕ ವಾಂತಿ, ಭೇದಿ, ಜ್ವರ ಕಾಣಿಸಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಎಲ್ಲಾ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ.
ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ - ಉಪಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ
ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಉಪಹಾರ ಸೇವಿಸಿದ ಬಳಿಕ 25ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ