ಚಿತ್ರದುರ್ಗ:ಹೊಸಳ್ಳಿ-ದುಗ್ಗಾಣಿಹಟ್ಟಿ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಕಳೆದ ಎರಡು ಮೂರು ದಿನಗಳ ಹಿಂದೆ ಹೊಸಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಅಷ್ಟೇ ಅಲ್ಲದೆ ನಿನ್ನೆ ಸಂಜೆ ಹೊಲದಲ್ಲಿ ಮೇಯುತ್ತಿದ್ದ ಮೇಕೆ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿತ್ತು. ಇದರಿಂದ ಜನತೆ ಆತಂಕಕ್ಕೆ ಒಳಗಾಗಿದ್ದರು. ಈ ಕುರಿತಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ, ಚಿರತೆ ಸೆರೆಹಿಡಿಯುವಂತೆ ಮನವಿ ಮಾಡಿಕೊಂಡಿದ್ದರು.